ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಧ್ವಜಾರೋಹಣ ಮಾಡಿ ಮಾತನಾಡಿದ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಈಶ್ವರ ಪ್ರಸಾದ್ ಎ. ಅವರು, ವಿದ್ಯಾರ್ಥಿಗಳು ಭಾರತದ ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಿ ಬಾಳಬೇಕೆಂದು ನುಡಿದರು.
ಶ್ರೀ ಭಾರತೀ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಡಾ. ಬಿ. ರಾಜೇಂದ್ರ ಪ್ರಾಸಾದ್ ಅವರು ಮಾತನಾಡಿ, ವಿದ್ಯಾರ್ಥಿಗಳು ಡಾ. ಬಿ.ಆರ್ ಅಂಬೇಡ್ಕರ್ರವರು ರಚಿಸಿದ ಸಂವಿಧಾನದ ಮೂಲತತ್ತ್ವಗಳನ್ನು ಅರಿತು ಸತ್ಪ್ರಜೆಗಳಾಗಿ ದೇಶಕ್ಕೆ ಉತ್ತಮ ಕೀರ್ತಿಯನ್ನು ತರಲಿ ಎಂದು ಗಣರಾಜ್ಯೋತ್ಸವಕ್ಕೆ ಶುಭಹಾರೈಸಿದರು.
ಸ್ವಾಮಿ ಸದಾನಂದ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳಿಂದ ದೇಶಭಕ್ತಿಗೀತೆ ಹಾಗೂ ಭಾಷಣ ಕಾರ್ಯಕ್ರಮ ನಡೆಯಿತು.
ಗಣಕ ವಿಭಾಗದ ಉಪನ್ಯಾಸಕರಾದ ಶ್ರೀ ಅನಂತ ನಾರಾಯಣ ಪದಕಣ್ಣಾಯ ಸ್ವಾಗತಿಸಿದರು. ಸ್ವಾಮಿ ಸದಾನಂದ ಸರಸ್ವತಿ ವಿದ್ಯಾಲಯದ ಮುಖ್ಯೋಪಾಧ್ಯಾಯರಾದ ಶ್ರೀ ಗುರುರಾಜ್ ಭಟ್ ವಂದಿಸಿದರು. ಈ ಸಂಧರ್ಭದಲ್ಲಿ ಸಂಸ್ಥೆಯ ಎಲ್ಲಾ ಸಿಬ್ಬಂದಿವರ್ಗದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.