ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆ : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ

ನಂತೂರು, ಆ.15 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ವಿಶೇಷ ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದು ಮಾತನಾಡಿದ ನಿವೃತ್ತ ಯೋಧರು ಹಾಗೂ ಉಪನ್ಯಾಸಕ ಶ್ರೀ ಎಚ್.ಎಚ್. ಬೆಳ್ಳಿಯಪ್ಪ ಗೌಡ ಅವರು, ಯೋಧರು ಯಾವುದೇ ಸಂಕಷ್ಟದ ಪರಿಸ್ಥಿತಿ ಎದುರಾದರೂ ತಮ್ಮ ಕರ್ತವ್ಯವನ್ನು ನೆರವೇರಿಸಿ ದೇಶದ ರಕ್ಷಣೆ ಮಾಡುತ್ತಾರೆ. ವಿದ್ಯಾರ್ಥಿಗಳು ಕೂಡಾ ಯೋಧರಾಗುವ ಬಗ್ಗೆ ಗಮನ ಹರಿಸಬೇಕು ಎಂದರು.

ಮಂಗಳೂರು ಲಯನ್ಸ್ ಕ್ಲಬ್ ಕಾರ್ಯದರ್ಶಿ ಶ್ರೀ ಕೃಷ್ಣಾನಂದ ಶೆಣೈ ಅವರು ಮಾತನಾಡಿ, ಮಹಿಳೆಯರಿಗೂ ಸೇನೆಯಲ್ಲಿ ಸಾಕಷ್ಟು ಅವಕಾಶಗಳಿವೆ ಎಂದರು.

ಜೆಸಿಐ ಮಂಗಳೂರು ಶ್ರೇಷ್ಠದ ಅಧ್ಯಕ್ಷ ರವಿಚಂದ್ರ ಪಾಟಾಳಿ ಅವರು ಮಾತನಾಡಿ, ಕೋವಿಡ್-19ರ ಮಧ್ಯೆಯೂ ವಿದ್ಯಾರ್ಥಿಗಳು ಆಸಕ್ತಿ ಕಳೆದುಕೊಳ್ಳದೆ ಉತ್ಸಾಹ, ಕ್ರಿಯಾಶೀಲತೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಸ್ವಾಮಿ ಸದಾನಂದ ಸರಸ್ವತಿ ವಿದ್ಯಾಲಯದ ಶಿಕ್ಷಕ ವೃಂದದವರು ದೇಶಭಕ್ತಿಗೀತೆಯನ್ನು ಹಾಡಿದರು.

ಈ ಸಂದರ್ಭ ಮಂಗಳೂರು ಲಯನ್ಸ್‌ನವರು ಪ್ರಾಯೋಜಿಸಿದ ಬಹುಮಾನಗಳನ್ನು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಯಿತು. ಶಿಕ್ಷಕಿ ನಿಖಿತಾ ಪದವಿಪೂರ್ವ ಕಾಲೇಜಿನಲ್ಲಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು.

ಸದಾನಂದ ಸರಸ್ವತಿ ವಿದ್ಯಾಲಯದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ದುರ್ಗಾವತಿ ಸ್ವಾಗತಿಸಿ, ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಭಟ್ ವಂದಿಸಿದರು. ಶ್ರೀ ಭಾರತೀ ಪದವಿ ಕಾಲೇಜಿನ ಉಪಪ್ರಾಂಶುಪಾಲರಾದ ಗಂಗಾರತ್ನ ಮುಗುಳಿ ನಿರೂಪಿಸಿದರು.

Highslide for Wordpress Plugin