ಮಂಗಳೂರು ನಂತೂರಿನ ಶ್ರೀ ಭಾರತೀ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ, ಅಂತರಾಷ್ಟ್ರೀಯ ಮಾತೃ ಭಾಷಾ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯೋಪಾಧ್ಯಾಯಿನಿ ಗಂಗಾರತ್ನ , ಮಾತೃಭಾಷೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
8ನೇ ತರಗತಿಯ ವಿದ್ಯಾರ್ಥಿಗಳಾದ ಚಹಿತ್, ಸಾಯಿ ಋತ್ವಿಕ್,ಅವನೀಶ್ ಹಾಗೂ 9ನೇ ತರಗತಿಯ ಪ್ರೀತಮ್ ತಾಯ್ನುಡಿಯ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ನಂತರ 8ನೇ ಮತ್ತು 9ನೇ ತರಗತಿಯ ಎಲ್ಲ ವಿದ್ಯಾರ್ಥಿನಿಯರು ನಾಡಗೀತೆ, ದೇಶಭಕ್ತಿ ಗೀತೆಗಳನ್ನು ಹಾಡಿದರು.
ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ಸುಭದ್ರಾ ಭಟ್, ತಾಯಿಯ ಹಾಗೂ ತಾಯ್ನುಡಿಯ ಸಂಬಂಧದ ಕುರಿತು ಮಾತನಾಡಿದರು.
ಶ್ರೀಮತಿ ಸುಭದ್ರಾ ಭಟ್ ಸ್ವಾಗತಿಸಿ, ಶ್ರೀಮತಿ ಗಾಯತ್ರಿ ಶೆಣೈ ಧನ್ಯವಾದಗೈದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ವೃಂದ, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.