ಮಂಗಳೂರು ನಂತೂರಿನ ಶ್ರೀ ಭಾರತೀ ಪದವಿ ಕಾಲೇಜಿನಲ್ಲಿ ಮಾತೃ ಭಾಷಾ ದಿವಸ್ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪದವಿ ಕಾಲೇಜಿನ ಉಪಪ್ರಾಂಶುಪಾಲರಾದ ಗಂಗಾರತ್ನ , ಮಾತೃಭಾಷೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ನಂತರ ವಿದ್ಯಾರ್ಥಿಗಳಾದ ತೃಪ್ತಿ, ಅಖಿಲಾ, ಅಕ್ಷಯಕೃಷ್ಣ ಹಾಗೂ ಅನನ್ಯಾ ಮಾತೃಭಾಷೆಯ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ವಾಣಿಜ್ಯ ಉಪನ್ಯಾಸಕರಾದ ಶ್ರೀ ಕಾರ್ತಿಕ್ ಕೃಷ್ಣ ಮಾತೃಭಾಷೆಯ ಅಗತ್ಯ,ಆಚರಣೆಗಳ ಕುರಿತು ಮಾತನಾಡಿದರು. ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರತಿಮ್ ಕುಮಾರ್ ಸ್ವಾಗತಿಸಿ, ಶ್ರೀ ಕಾರ್ತಿಕ್ ಕೃಷ್ಣ ಧನ್ಯವಾದಗೈದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕ ವೃಂದ, ಶಿಕ್ಷಕೇತರರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.