ವಾರ್ಷಿಕ ಕ್ರೀಡಾಕೂಟ 2018 – 19

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು-ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು
                                                                       – ಶ್ರೀ ಮಹಾಲಿಂಗ ಭಟ್, ಮ್ಯಾನೇಜಿಂಗ್ ಟ್ರಸ್ಟಿ, ಪ್ರಶಾಂತಿ ವಿದ್ಯಾಕೇಂದ್ರ, ಬಾಯಾರು

         ಶ್ರೀ ಭಾರತೀ ಸಮೂಹ ಸಂಸ್ಥೆಗಳ 2018-19ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ದಿನಾಂಕ 22.12.2018ರಂದು ನೆರವೇರಿತು. ಕ್ರೀಡಾಕೂಟದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಬಾಯಾರಿನ ಪ್ರಶಾಂತಿ ವಿದ್ಯಾಕೇಂದ್ರದ ಮ್ಯಾನೇಜಿಂಗ್ ಟ್ರಸ್ಟಿಗಳಾದ ಶ್ರೀ ಮಹಾಲಿಂಗ ಭಟ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು-ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು, ಈ ಮೂಲಕ ಜೀವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು, ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ. ಉತ್ತಮ ವಿದ್ಯಾರ್ಥಿ ಉತ್ತಮ ನಾಗರಿಕನಾಗಿ ಜೀವನದಲ್ಲಿ ಯಶಸ್ಸು ಪಡೆಯುತ್ತಾನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶ್ರೀ ಭಾರತೀ ಸಮೂಹ ಸಂಸ್ಥೆ ಸೇವಾಸಮಿತಿಯ ಕಾರ್ಯಾಲಯ ಕಾರ್ಯದರ್ಶಿಗಳಾದ ಶ್ರೀ ಎಂ.ಟಿ. ಭಟ್ ಅವರು, ಕ್ರೀಡಾಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕು, ಅವರು ರಾಷ್ಟ್ರೀಯ, ಅಂತರ್-ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಲು ಇಂತಹ ಕ್ರೀಡಾಕೂಟಗಳು ಪ್ರೋತ್ಸಾಹದಾಯಕ ಎಂದರು.

ಈ ಸಮಾರಂಭದಲ್ಲಿ ಮಿಲಗ್ರಿಸ್ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಕರಾದ ಶ್ರೀ ಬಾಲಕೃಷ್ಣ ಹಾಗೂ ಪದುವಾ ಕಾಲೇಜಿನ ದೈಹಿಕ ಶಿಕ್ಷಕರಾದ ಶ್ರೀ ಹರಿಪ್ರಸಾದ್ ಅವರು ಉಪಸ್ಥಿತರಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ವಿದ್ಯಾ ಭಟ್ ಸ್ವಾಗತಿಸಿ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಈಶ್ವರಪ್ರಸಾದ್ ಅವರು ವಂದಿಸಿದರು. ಉಪನ್ಯಾಸಕರಾದ ಶ್ರೀ ಅಶೋಕ್ ನಿರೂಪಣೆಗೈದರು.
ಪಥಸಂಚಲನ ಧ್ವಜಾರೋಹಣ ವಿವಿಧ ಆಟೋಟ ಸ್ಪರ್ಧೆಗಳು ಏರ್ಪಟ್ಟವು.

ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಸಿವಿಲ್ ಕಂಟ್ರಾಕ್ಟರ್‌ರಾದ ಶ್ರೀ ಮಧುಸೂದನ್ ನಾಯರ್ ಮುಖ್ಯ ಅತಿಥಿಯಾಗಿ ಆಗಮಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

 

Highslide for Wordpress Plugin