ಶ್ರೀ ಭಾರತೀ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ.

ಶ್ರೀ ಭಾರತೀ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ.

ದಿನಾಂಕ 28.02.2023 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಶ್ರೀ ಭಾರತೀ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ವಿವಿಧ ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದರು.‌ ಸಂಸ್ಥೆಯ ಕೋಶಾಧಿಕಾರಿ ಶ್ರೀ ಉದಯಶಂಕರ್‌ ನೀರ್ಪಾಜೆ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ರಾಜಗೋಪಾಲ್, ಮುಖ್ಯೋಪಾದ್ಯಾಯರಾದ ಗಂಗಾರತ್ನ ಮತ್ತು ಶಿಕ್ಷಕರು ವಿದ್ಯಾರ್ಥಿಗಳು ತಯಾರಿಸಿದ ಮಾದರಿಗಳನ್ನು ವೀಕ್ಷಿಸಿ, ಶ್ಲಾಘಿಸಿದರು. ನಂತರ ಅತ್ಯುತ್ತಮ ಮಾದರಿಗಳನ್ನು ತಯಾರಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

Highslide for Wordpress Plugin