ಶ್ರೀ ಭಾರತೀ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯಲ್ಲಿ ಗಾಂಧೀಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ

ಶ್ರೀ ಭಾರತೀ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯಲ್ಲಿ ಗಾಂಧೀಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವ ಜನ್ಮದಿನಾಚರಣೆಯ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರೌಢಶಾಲಾ ವಿದ್ಯಾರ್ಥಿಗಳು ಸಮೂಹ ಗಾಯನ ಮತ್ತು ಭಾಷಣಗಳನ್ನು ಪ್ರಸ್ತುತಪಡಿಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜೀವನ್‌ದಾಸ್ ಅವರು, ವಿದ್ಯಾರ್ಥಿಗಳು ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು;ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಹಿತನುಡಿಗಳನ್ನಾಡಿದರು.

ಈ ಸಂದರ್ಭದಲ್ಲಿ ಸ್ಕೌಟ್ಸ್ ಗೈಡ್ಸ್ ಮತ್ತು ರೋವರ್ ರೇಂಜರ್ಸ್ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಸ್ವಚ್ಛತಾಕಾರ್ಯ ನಡೆಸಿದರು.

Highslide for Wordpress Plugin