ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನದ  ಆಚರಣೆ

ರಾಷ್ಟ್ರೀಯ ಕ್ರೀಡಾ ದಿನದ  ಆಚರಣೆ

ದಿನಾಂಕ 29.8.2022ರಂದು ಶ್ರೀ ಭಾರತೀ ಸಮೂಹ ಸಂಸ್ಥೆಯ  ಶಂಕರ ಶ್ರೀ ಸಭಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು  ಆಚರಿಸಲಾಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಂಗಾರತ್ನ ಅಧ್ಯಕ್ಷ ತೆಯನ್ನು  ವಹಿಸಿದ್ದರು. ಈ ಸಂದರ್ಭದಲ್ಲಿ ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರತಿಮ್ ಕುಮಾರ್ ಪ್ರಸ್ತಾವನೆಯೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿ ಆಕಾಶ್  ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಬಗ್ಗೆ  ತಿಳಿಸಿದರು. ಸ್ವಾಮಿ ಸದಾನಂದ ಸರಸ್ವತೀ ವಿದ್ಯಾಲಯದ ದೈಹಿಕ ಶಿಕ್ಷಣ ಶಿಕ್ಷಕರಾದ ಜಯಪ್ರಕಾಶ್ ವಂದಿಸಿದರು.

Highslide for Wordpress Plugin