ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಮತ್ತು ಆಟಿಡೊಂಜಿ ಕೂಟ

ಮಂಗಳೂರು ನಂತೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ನಡೆಯಿತು. ಜೊತೆಗೆ ಆಟಿಡೊಂಜಿ ಕೂಟ ಗಮನ ಸೆಳೆಯಿತು.

ಭೂಸೇನೆಯಲ್ಲಿ 24 ವರ್ಷ (medical officer & gynaecologist) ಸೇವೆ ಸಲ್ಲಿಸಿದ ಕರ್ನಲ್ ಡಾ.ಮೋಹನ ಭಟ್ಟ ಪೆಲತ್ತಡ್ಕ ಅವರು ಧ್ವಜಾರೋಹಣಗೈದು, ಮಾತನಾಡಿ, ವಿದ್ಯಾರ್ಥಿಗಳು ದೇಶಕ್ಕೆ ಸೇವೆ ಸಲ್ಲಿಸುವ ಅವಕಾಶವನ್ನು ತುಂಬು ಮನಸ್ಸಿನಿಂದ ಸ್ವೀಕರಿಸಬೇಕು ಎಂದು ತಮ್ಮ ಅನುಭವಗಳನ್ನು ಹಂಚಿಕೊಂಡರು.

ನಂತರ ತುಳುನಾಡಿನಲ್ಲಿ ವಿಶೇಷ ವಾಗಿ ಆಚರಣೆಗಳನ್ನು ನಡೆಸುವ ಆಟಿ ತಿಂಗಳಿನ(ಆಷಾಢ) ಮಹತ್ವವನ್ನು ತಿಳಿಸುವ ಆಟಿಡೊಂಜಿ ಕೂಟ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಆಟಿ ತಿಂಗಳಿನಲ್ಲಿ ಮಾಡುವ ವಿಶೇಷ ತಿಂಡಿ,ಖಾದ್ಯಗಳ ಬಗ್ಗೆ ಪೋಷಕರಿಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಿದರು.

ಇದರೊಂದಿಗೆ ತುಳುನಾಡಿನ ಜನಪದ ಕಲಾಪ್ರಕಾರವಾದ ಆಟಿಕಳೆಂಜ ಕುಣಿತವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.

ಸೇವಾಸಮಿತಿಯ ಕಾರ್ಯದರ್ಶಿ ಶ್ರೀ ಶ್ರೀಕೃಷ್ಣ ನೀರಮೂಲೆ ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿ, ವಿದ್ಯಾರ್ಥಿಗಳು ಸಾಂಸ್ಕೃತಿಕವಾಗಿ ಬೆಳೆಯುವುದರೊಂದಿಗೆ ಸಂಸ್ಥೆಗೆ ದೇಶಕ್ಕೆ ಒಳ್ಳೆಯ ಹೆಸರು ತರಬೇಕು ಎಂದರು.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಲ್ ಡಾ. ಮೋಹನ ಭಟ್ಟ ಪೆಲತ್ತಡ್ಕ ಅವರನ್ನು ಸನ್ಮಾನಿಸಲಾಯಿತು.

ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಶ್ರೀ ರಾಜಗೋಪಾಲ ಭಟ್ ಮತ್ತು ಪ್ರಾಂಶುಪಾಲರಾದ ಗಂಗಾರತ್ನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ನೀಡಲಾಯಿತು.

ಬಳಿಕ ವಿದ್ಯಾರ್ಥಿಗಳಿಂದ ದೇಶಭಕ್ತಿಗೆ ಸಂಬಂಧಿಸಿದ ಸಾಂಸ್ಕೃತಿಕ ಚಟುವಟಿಕೆಗಳು ನಡೆದವು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಶಿಕ್ಷಕರಾದ ಸಂಗೀತಾ, ರಶ್ಮಿ, ವೀಣಾ, ಭವ್ಯಾ, ಶೋಭಾ, ಸೌಮ್ಯಾ ಅವರು ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದರು .

Highslide for Wordpress Plugin