ನಂತೂರು : ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ರಕ್ಷಾಬಂಧನ
ನಂತೂರು, ಆ.11 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 11-8-22 ರಂದು ರಕ್ಷಾಬಂಧನ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ನ್ಯಾಯವಾದಿ ಶ್ರೇಯಸ್ ಅವರು ರಕ್ಷಾಬಂಧನದ ವಿಶೇಷತೆಯನ್ನು ವಿವರಿಸಿ, ರಕ್ಷೆ ನಮ್ಮ ಮಧ್ಯೆ ಭ್ರಾತೃತ್ವ ಹಾಗೂ ಒಗ್ಗಟ್ಟನ್ನು ಹೆಚ್ಚಿಸುತ್ತದೆ ಎಂದರು.
ಇನ್ನೊಬ್ಬರು ಮುಖ್ಯ ಅತಿಥಿಗಳಾದ ಡಾ.ಪ್ರಶಾಂತ ಹೆಗ್ಡೆ ಅವರು ಗುರುಪೂರ್ಣಿಮೆಯ ಮಹತ್ವವನ್ನು ವಿವರಿಸಿದರು.
ಶ್ರೀ ಭಾರತೀ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಜೀವನ್ ದಾಸ್, ಶ್ರೀ ಭಾರತೀ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಗಂಗಾರತ್ನ ಮತ್ತು ಬೋಧಕ, ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಹಾಗೂ ಸ್ವಾಮಿ ಸದಾನಂದ ಸರಸ್ವತಿ ಆಂಗ್ಲ ಮಾಧ್ಯಮದ ಪ್ರಾಥಮಿಕ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಂತರ ಶಿಕ್ಷಕಿಯರು ಶಿಕ್ಷಕ ಹಾಗೂ ಶಿಕ್ಷಕೇತರ ಸಹೋದರರಿಗೆ ಆರತಿ ಎತ್ತಿ ರಕ್ಷಾಬಂಧನ ನೆರವೇರಿಸಿ, ಆಶೀರ್ವಾದ ಪಡೆದರು. ಹಾಗೆಯೇ ಎಲ್ಲ ವಿದ್ಯಾರ್ಥಿಗಳು ಪರಸ್ಪರ ರಕ್ಷೆ ಕಟ್ಟಿ ಭ್ರಾತೃತ್ವವನ್ನು ಮೆರೆದರು. ಈ ಸಂದರ್ಭದಲ್ಲಿ ಎಲ್ಲರಿಗೂ ಸಿಹಿ ಹಂಚಲಾಯಿತು.
ದೈಹಿಕ ಶಿಕ್ಷಣ ಶಿಕ್ಷಕ ಪ್ರತಿಮ್ ಕುಮಾರ್ ಸ್ವಾಗತಿಸಿ, ವಂದಿಸಿದರು