ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆ ಯಲ್ಲಿ ಇಂದು 67ನೇ ಕರ್ನಾಟಕ ರಾಜ್ಯೋತ್ಸವದ ಆಚರಣೆ ಸಂಭ್ರಮದಿಂದ ನಡೆಯಿತು.
ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅಮೃತ ಲಕ್ಷ್ಮೀ ಮತ್ತು ಹತ್ತನೇ ತರಗತಿಯ ವಿದ್ಯಾರ್ಥಿ ಪ್ರೀತಮ್ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು.
ನಂತರ ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿಗೆ ಸಂಬಂಧಪಟ್ಟ ಸಮೂಹ ಗಾಯನ, ಭಾಷಣ,ಆಶುಭಾಷಣ,
ರಸಪ್ರಶ್ನೆ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಶಿಕ್ಷಕರು ಹಾಗೂ ಶಿಕ್ಷಕೇತರ ವೃಂದದವರು ಪಾಲ್ಗೊಂಡರು.
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕಳೆದ ದಿನಾಂಕ 28-10-22ರಂದು ವಿದ್ಯಾರ್ಥಿಗಳಿಂದ ಕೋಟಿ ಕಂಠ ಗಾಯನ ಹಾಗೂ ಸಂಕಲ್ಪವಿಧಿ ಸ್ವೀಕಾರ ನಡೆಯಿತು.