ನಂತೂರು, ನ.26 : ಮಂಗಳೂರು, ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ದಿನಾಂಕ 26-11-2021ರಂದು ಸಂವಿಧಾನ ದಿವಸ್ ಆಚರಣೆ ನಡೆಯಿತು.
ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜೀವನ್‌ದಾಸ್ ಅವರು ಮಾತನಾಡಿ, ಸಂವಿಧಾನದ ನಿಯಮಗಳಂತೆ ನಮ್ಮ ಬದುಕಿನಲ್ಲಿಯೂ ನಾವು ನಿಯಮಗಳನ್ನು ಪಾಲಿಸಿದರೆ ಉತ್ಕೃಷ್ಟ ಪ್ರಜೆಗಳಾಗಿ ಬದುಕಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸೇವಾ ಸಮಿತಿಯ ಕಾರ್ಯಾಲಯ ಕಾರ್ಯದರ್ಶಿಗಳಾದ ಶ್ರೀ ಎಂ.ಟಿ.ಭಟ್ ಅವರು, ನಿಯಮಪಾಲನೆ ನಮ್ಮ ಸಂಸ್ಕೃತಿಯಲ್ಲಿ ಅಲಿಖಿತವಾಗಿ ಬಂದಿದೆ. ಅದು ನಮ್ಮ ಜೀವನದಲ್ಲಿ ಹಾಸುಹೊಕ್ಕಾಗಿ ಬೆಳೆದು ಬಂದಿದೆ. ವಿದ್ಯಾರ್ಥಿಗಳು ಸಂವಿಧಾನದ ಎಲ್ಲ ನಿಯಮಗಳನ್ನು ಪಾಲಿಸಿ ಪ್ರಶಂಸೆಗೆ ಪಾತ್ರರಾಗಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಗಂಗಾರತ್ನ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರತಿಮ್‌ಕುಮಾರ್ ಎಸ್. ಸಂವಿಧಾನದ ಪ್ರತಿಜ್ಞಾವಿಧಿಯನ್ನು ಬೋಧಿಸಿ, ಪ್ರಸ್ತಾವನೆಗೈದರು. ವಿದ್ಯಾರ್ಥಿ ಸುಮಂತ್ ಸ್ವಾಗತಿಸಿ, ವಿದ್ಯಾರ್ಥಿ ನವೀನ್‌ಚಂದ್ರ ವಂದಿಸಿದರು. ವಿದ್ಯಾರ್ಥಿನಿ ಕುಮಾರಿ ವೈಭವಿ ನಿರೂಪಿಸಿದರು.