ದಿನಾಂಕ 28.11.2021ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ವತಿಯಿಂದ ಜಿಲ್ಲಾಧಿಕಾರಿಗಳ ನಿವಾಸದಲ್ಲಿ 2020-21ನೇ ಸಾಲಿನ ತೃತೀಯ ಚರಣ ಕಬ್, ಸುವರ್ಣ ಗರಿ ಬುಲ್ ಬುಲ್, ತೃತೀಯ ಸೋಪಾನ ಸ್ಕೌಟ್ಸ್ ಮತ್ತು ಗೈಡ್ಸ್, ನಿಪುಣ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ಭಾರತೀ ಸಮೂಹ ಸಂಸ್ಥೆಯ ಸ್ಕೌಟ್ ಗೈಡ್ಸ್ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳು ಭಾಗವಹಿಸಿದರು. ಗೈಡ್ಸ್ ವಿದ್ಯಾರ್ಥಿನಿ ಕುಮಾರಿ ಸಾನ್ವಿ ಹಾಗೂ ರೋವರ್ಸ್ ವಿದ್ಯಾರ್ಥಿ ಪ್ರಶಾಂತ್ ಕುಮಾರ್ ಗಾಂವ್ಕರ್ ಪ್ರಮಾಣಪತ್ರಗಳನ್ನು
ಸ್ವೀಕರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸಂಸ್ಥೆಯ ಅಧ್ಯಕ್ಷರಾಗಿರುವ ಡಾ. ರಾಜೇಂದ್ರ ಕೆ. ವಿ ಅವರು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಿದರು.