ನಂತೂರು, ಫೆ : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಸೇವಾ ಸಮಿತಿ ಆಶ್ರಯದಲ್ಲಿ ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ವಿಭಾಗಗಳ ಬೋಧಕ, ಬೋಧಕೇತರ ವೃಂದದವರಿಗೆ ಎರಡು ದಿನಗಳ ತರಬೇತಿ ಶಿಬಿರದ ಆರಂಭ ಮತ್ತು ವಿಶೇಷ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಸೇವಾಸಮಿತಿಯ ಆಡಳಿತಾಧಿಕಾರಿ ಗಳಾದ ಪ್ರೊ.ಶಂಕರ ಭಟ್ ಕಿನಿಲ ಅವರು ಶಿಕ್ಷಕರ ಮಹತ್ವ, ಪಾಠದ ಹಲವು ವಿಧಾನಗಳು, ವಿದ್ಯಾರ್ಥಿ ಮತ್ತು ಶಿಕ್ಷಕರ ಸಂಬಂಧಗಳ ಬಗ್ಗೆ ಅನುಭವದ
ಮಾತು- ಮಾಹಿತಿಗಳನ್ನು ನೀಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸೇವಾಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಶ್ರೀಕೃಷ್ಣ ನೀರಮೂಲೆ ಅವರು ವಿದ್ಯಾರ್ಥಿಗಳಿ ಗೆ ಕಲಿಕೆಯಲ್ಲಿ ಆಸಕ್ತಿ ಮೂಡಿಸುವ ವಿವಿಧ ಕಲಿಕಾ ತಂತ್ರಗಳನ್ನು ವಿವರಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸೇವಾಸಮಿತಿಯ ಕೋಶಾಧಿಕಾರಿಗಳಾದ ಶ್ರೀ ಉದಯಶಂಕರ್ ನೀರ್ಪಾಜೆಯವರು ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆಯಲು ಬೋಧಕ ವೃಂದದವರು ಸಂಪೂರ್ಣ ಸಹಕಾರ ಹಾಗೂ ವಿದ್ಯಾರ್ಥಿಗಳ ಕಡೆಗೆ ಗಮನಹರಿಸುವುದು ಅತ್ಯಂತ ಅವಶ್ಯಕ ಎಂದರು.
ಈ ಸಭೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜೀವನ್‌ದಾಸ್ ಹಾಗೂ ಪಪೂ ಕಾಲೇಜಿನ ಪ್ರಾಂಶುಪಾಲೆ ಗಂಗಾರತ್ನ ಉಪಸ್ಥಿತರಿದ್ದರು.
ನಂತರ ಎಲ್ಲ ಬೋಧಕ ಹಾಗೂ ಬೋಧಕೇತರ ವೃಂದದವರಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಸೇವಾ ಸಮಿತಿಯ ಸಂಯೋಜಕರಾದ ಉಂಡೆಮನೆ ಶ್ರೀ ವಿಶ್ವೇಶ್ವರ ಭಟ್ ಅವರು ತರಬೇತಿ ನೀಡಿದರು.