ರಾಷ್ಟ್ರೀಯ ಕ್ರೀಡಾ ದಿನದ ಆಚರಣೆ
ದಿನಾಂಕ 29.8.2022ರಂದು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರ ಶ್ರೀ ಸಭಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಂಗಾರತ್ನ ಅಧ್ಯಕ್ಷ ತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರತಿಮ್ ಕುಮಾರ್ ಪ್ರಸ್ತಾವನೆಯೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿ ಆಕಾಶ್ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಬಗ್ಗೆ ತಿಳಿಸಿದರು. ಸ್ವಾಮಿ ಸದಾನಂದ ಸರಸ್ವತೀ ವಿದ್ಯಾಲಯದ ದೈಹಿಕ ಶಿಕ್ಷಣ ಶಿಕ್ಷಕರಾದ ಜಯಪ್ರಕಾಶ್ ವಂದಿಸಿದರು.