ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ.

ದಿನಾಂಕ ೦೫.೦೯.೨೦೨೨ರಂದು ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಸೋಮವಾರ ಶಿಕ್ಷಕರ ದಿನಾಚರಣೆ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಿವೃತ್ತ ಪ್ರಾಂಶುಪಾಲರು ಹಾಗೂ ಸೇವಾ ಸಮಿತಿಯ ಆಡಳಿತಾಧಿಕಾರಿಗಳಾದ ಪ್ರೊ.ಶಂಕರ ಭಟ್ ಕಿನಿಲ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಶಿಸ್ತು ಇದ್ದವರು ತಮ್ಮನ್ನು ತಾವು ಆಳುತ್ತಾರೆ. ಶಿಸ್ತು ಇಲ್ಲದವರನ್ನು ಬೇರೆಯವರು ಆಳುತ್ತಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜೀವನ್‌ದಾಸ್ ಅವರು ಮಾತನಾಡಿ, ಗುರುಗಳು ವಿದ್ಯಾರ್ಥಿಗಳನ್ನು ಕತ್ತಲಿನಿಂದ ಬೆಳಕಿನೆಡೆಗೆ ನಡೆಸುತ್ತಾ ಪರಿಪೂರ್ಣತೆಯ ಕಡೆಗೆ ಕೊಂಡೊಯ್ಯುತ್ತಾರೆ ಎಂದರು.

ಪಪೂ ಕಾಲೇಜಿನ ಪ್ರಾಂಶುಪಾಲೆ ಗಂಗಾರತ್ನ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು.ಅಮೃತಲಕ್ಷ್ಮಿ ಶಿಕ್ಷಕರ ಮಹತ್ವದ ಬಗ್ಗೆ ಮಾತನಾಡಿದರು. ಎಂಟನೇ ತರಗತಿಯ ವಿದ್ಯಾರ್ಥಿನಿ ಕು.ಸಾಧನಾ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಹಿರಿಯರು ಹಾಗೂ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ ಪ್ರೊ.ಶಂಕರ ಭಟ್ ಇವರನ್ನು ಸನ್ಮಾನಿಸಲಾಯಿತು. ಉಪನ್ಯಾಸಕಿ  ಪವಿತ್ರಾ ಸ್ವಾಗತಿಸಿ, ಉಪನ್ಯಾಸಕಿ ಸುಶ್ಮಿತಾ ವಂದಿಸಿದರು. ಪಪೂ ಕಾಲೇಜಿನ ಉಪಪ್ರಾಂಶುಪಾಲೆ ಗಾಯತ್ರಿ ಶೆಣೈ ಅತಿಥಿಗಳ ಪರಿಚಯ ಮಾಡಿದರು. ಉಪನ್ಯಾಸಕಿ ರಶ್ಮಿ ನಿರೂಪಿಸಿದರು.

Highslide for Wordpress Plugin