ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಮಂಗಳೂರಿನ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ವಿಜಯ ಶೆಣೈ ಅವರು ಧ್ವಜಾರೋಹಣ ನೆರವೇರಿಸಿ ಗಣರಾಜ್ಯ ದಿನಾಚರಣೆಯ ಮಹತ್ವವನ್ನು ವಿವರಿಸುತ್ತಾ, ದೇಶಕ್ಕಾಗಿ ಬಲಿದಾನ ಗೈದ ವೀರಯೋಧರನ್ನು ಗೌರವಪೂರ್ವಕವಾಗಿ ಸ್ಮರಿಸಿಕೊಂಡು ವಿದ್ಯಾರ್ಥಿಗಳು ದೇಶದ ಬಗ್ಗೆ ಅಭಿಮಾನವನ್ನು ಹೊಂದುವುದರ ಜೊತೆಗೆ ತಮ್ಮ ಉತ್ತಮ ಸಾಧನೆಯಿಂದ ಸಂಸ್ಥೆಗೆ ಕೀರ್ತಿಯನ್ನು ತರಬೇಕು ಎಂದರು.

ಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ರಾಜಗೋಪಾಲ್. ಜಿ, ಪ್ರಾಂಶುಪಾಲರಾದ ಗಂಗಾರತ್ನ, ಸ್ವಾಮಿ ಸದಾನಂದ ಸರಸ್ವತಿ ವಿದ್ಯಾಲಯದ ಮುಖ್ಯ ಶಿಕ್ಷಕಿ ಶ್ರೀಮತಿ ದುರ್ಗಾವತಿ, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ವಿಜಯ ಶೆಣೈ ಅವರು ಎಲ್ಲರಿಗೂ ಸಿಹಿತಿಂಡಿ ವಿತರಿಸಿದರು.

ಶಿಕ್ಷಕಿಯರಾದ ಸಂಗೀತಾ ಸ್ವಾಗತಿಸಿ ಮಲ್ಲಿಕಾ ವಂದಿಸಿದರು.ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ನಿತಿನ್ ಕುಮಾರ್ ನಿರೂಪಿಸಿದರು.

Highslide for Wordpress Plugin