
ನಂತೂರು, ಫೆ.5 : ಮಂಗಳೂರು ನಂತೂರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ದಿವಸ ದ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಬದಿಯಡ್ಕ ಶ್ರೀ ಭಾರತೀ ವಿದ್ಯಾ ಪೀಠದ ಪ್ರಾಂಶುಪಾಲರಾದ ಶ್ರೀ ಸತ್ಯನಾರಾಯಣ ಶರ್ಮಾ ಭಾಗವಹಿಸಿದರು.
ಅವರು ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯಗಳು, ವಿದ್ಯೆಯ ಮಹತ್ವ, ವಿದ್ಯಾರ್ಥಿಗಳು ಸ್ಪರ್ಧಾತ್ಮಕವಾಗಿ ಮತ್ತು ಸಕಾರಾತ್ಮಕವಾಗಿ ಯೋಚಿಸುವ ಉಪಾಯಗಳು ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಯ ಮಹತ್ವ ದ ಕುರಿತು ತಿಳಿಸಿದರು.
ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಭಟ್ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಅಂಕ ಮಾತ್ರವಲ್ಲದೆ ಉತ್ತಮ ಸಂಸ್ಕಾರ ಇದ್ದಾಗ ಯಶಸ್ಸು ಸಾಧ್ಯ ಎಂದು ಹೇಳಿದರು.
ವಿದ್ಯಾರ್ಥಿಗಳು ಕಾರ್ಯಾಗಾರ ದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.