ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಎಂಟನೇ ತರಗತಿಯ ಕಿಶನ್ ವಿ.  ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ, ಎಂಟನೇ ತರಗತಿಯ ಸತ್ಯಂ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ, ಎಂಟನೇ ತರಗತಿಯ ಪ್ರಮಥ್ ಕುಮಾರ್ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿದ್ದಾರೆ.

ನಮ್ಮ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ನಿತಿನ್, ಮಾರ್ಗದರ್ಶನ ಮಾಡಿದ ಪ್ರಾಂಶುಪಾಲರಾದ ಗಂಗಾರತ್ನಾ ಮತ್ತು ಮಾರ್ಗದರ್ಶನ ಮಾಡಿದ ಡೈರೆಕ್ಟರ್ ಗಿರೀಶ್ ಅವರಿಗೆ ಹಾರ್ದಿಕ ಅಭಿನಂದನೆಗಳು.

Highslide for Wordpress Plugin
Loading...