ಶ್ರೀ ಭಾರತೀ ಪದವಿಪೂರ್ವ ಹಾಗೂ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉ‍ದ್ಘಾಟನೆ

ಮಂಗಳೂರು, ನಂತೂರು ಶ್ರೀ ಭಾರತೀ ಪದವಿಪೂರ್ವ ಹಾಗೂ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಶ್ರೀ ಭಾರತೀ ಪದವಿಪೂರ್ವ ಕಾಲೇಜು ಹಾಗು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ನಂತೂರು, ಮಂಗಳೂರು ಇಲ್ಲಿ ದಿನಾಂಕ 04_07_2025 ರ ಶುಕ್ರವಾರದಂದು ವಿದ್ಯಾರ್ಥಿ ಸಂಘದ ಹಾಗೂ ವಿವಿಧ ವಿಷಯವಾರು ಸಂಘದ ಉದ್ಘಾಟನಾ ಸಮಾರಂಭ ಶಂಕರಶ್ರೀ ಸಭಾಭವನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಮೋಹನ್ ರಾಜ್ ಅವರು ಮಾತನಾಡಿ, ವಿದ್ಯಾರ್ಥಿಗಳು ಸೋಲಿಗೆ ಅಂಜಬಾರದು. ಸೋಲನ್ನು ಸವಾಲಾಗಿ ತೆಗೆದುಕೊಳ್ಳಬೇಕು ಮತ್ತು ತಮ್ಮ ಗುರಿಯನ್ನು ಸಾಧಿಸಬೇಕು, ಹೆತ್ತ ತಾಯಿ ಮತ್ತು ಹೊತ್ತ ಭೂಮಿ ತಾಯಿಗೆ ಗೌರವ ಕೊಡಬೇಕು ಎಂದರು.

ಇನ್ನೋರ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಭಗವತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುರೇಖಾ ಜಯಪ್ರಕಾಶ ಅವರು ಮಾತನಾಡಿ, ವಿದ್ಯಾರ್ಥಿ ನಾಯಕರು ಎಲ್ಲರೊಂದಿಗೆ ಪ್ರೀತಿಪಾತ್ರರಾಗಿ ನಾಯಕತ್ವ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ನಿರ್ದೇಶಕ ಗಿರೀಶ್ ಎಂ. ಅವರು ವಿದ್ಯಾರ್ಥಿಗಳಿಗೆ ಚುನಾವಣೆಯ ಅರಿವು ಮೂಡಿಸುವುದಕ್ಕಾಗಿ ಶಿಕ್ಷಣ ಸಂಸ್ಥೆಗಳಲ್ಲಿ ಚುನಾವಣೆ ನಡೆಸುವುದು ಶ್ಲಾಘನೀಯ ಎಂದರು.

ಮುಖ್ಯ ಅತಿಥಿಗಳು ವಿದ್ಯಾರ್ಥಿ ನಾಯಕರಿಗೆ ರಿಬ್ಬನ್ ಮತ್ತು ಪದನಾಮವನ್ನು ನೀಡಿದರು. ಸಂಸ್ಥೆಯ ಪ್ರಾಂಶುಪಾಲ ಸಂದೀಪ್ ಆಚಾರ್ಯ ಅವರು ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞೆ ಬೋಧಿಸಿದರು. ವಿವಿಧ ವಿಷಯವಾರು ಸಂಘಗಳನ್ನು ಉದ್ಘಾಟಿಸಲಾಯಿತು.

ವಿದ್ಯಾರ್ಥಿನಿ ಸಾಧನಾ ಸ್ವಾಗತಿಸಿ, ತನುಶ್ರೀ ವಂದಿಸಿದರು. ಶ್ರೀಸ್ತುತಿ ಕಾರ್ಯಕ್ರಮ ನಿರೂಪಿಸಿದರು.

Highslide for Wordpress Plugin