2023 – 24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 100% ಫಲಿತಾಂಶ -ಹಾರ್ದಿಕ ಅಭಿನಂದನೆಗಳು

ದಿನಾಂಕ 22-9-2024ರಂದು ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ, ವಿವಿಧ ವಿಷಯವಾರು ಉಪನ್ಯಾಸಕರ ಸಂಘ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಮೂಡಬಿದ್ರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ 2023 – 24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದ ನಮ್ಮ ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಪದವಿ ಪೂರ್ವ ಕಾಲೇಜನ್ನು ಅಭಿನಂದಿಸಲಾಯಿತು. ಪ್ರಾಂಶುಪಾಲರಾದ ಗಂಗಾರತ್ನ, ವಿಷಯ ಉಪನ್ಯಾಸಕರಾದ ಕಾರ್ತಿಕ್ ಕೃಷ್ಣ, ವೀಣಾ, ಶೋಭಾ, ಮಲ್ಲಿಕಾ, ಗಾಯತ್ರಿ ಎನ್.ಎಸ್. ಅವರನ್ನು ಶಾಲು ಹಾಕಿ ಸ್ಮರಣಿಕೆ ನೀಡಿ ಗೌರವಿಸಲಾಗಿದೆ.

Highslide for Wordpress Plugin