ದಕ್ಷಿಣ ಕನ್ನಡ ಜಿಲ್ಲಾ ಪ್ರಾಚಾರ್ಯರ ಸಂಘ (ರಿ) ಮಂಗಳೂರು ಇವರಿಂದ ದಿನಾಂಕ 14 /9 /2025 ರಂದು ನಡೆಯುವ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶ್ರೀ ಭಾರತೀ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ 2024- 25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 100 ಶೇಕಡ ಫಲಿತಾಂಶ ದಾಖಲಿಸಿರುವುದಕ್ಕೆ ಅಭಿನಂದನೆ ಸಲ್ಲಿಸಲಾಯಿತು.
ಕಾಲೇಜು ಸತತ ನಾಲ್ಕು ವರ್ಷಗಳಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿರುತ್ತದೆ ಎಂದು ತಿಳಿಸಲು ಹೆಮ್ಮೆಪಡುತ್ತೇವೆ.
