ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ

ಸ್ವಾತಂತ್ರ್ಯ ದಿನಾಚರಣೆ

ನಂತೂರ್ ಆ ೧೫ : ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಗಜಾನನ ಪೈ ತೋನ್ಸೆ Rtd General Manager KIOCL.. ಧ್ವಜಾರೋಹಣ ಗೈದರು, ಬಳಿಕ ಅವರು ಮಾತನಾಡಿ, ದೇಶದಲ್ಲಿ ಪ್ರತಿಯೊಬ್ಬ ನಾಗರಿಕನೂ ಸಹ ಸಿಂಹನಾಗಿರಬೇಕು, ಹಾಗಿದ್ದಲ್ಲಿ ಮಾತ್ರ ದೇಶವನ್ನು ಅಭಿವೃದ್ಧಿಗೊಳಿಸಲು ಸಾಧ್ಯ, ಭಾರತ ದೇಶದ ಪ್ರಜೆಗಳೆಲ್ಲರೂ ಒಂದೇ ಕುಟುಂಬದವರು, ಒಗ್ಗಟ್ಟಿನಲ್ಲಿ ಬಲವಿದೆ ಎಂಬ ಸಂದೇಶವನ್ನು ಸಾರಿದರು.

 ಶ್ರೀ ಶ್ರೀಕೃಷ್ಣ ನೀರಮೂಲೆ ಕಾರ್ಯದರ್ಶಿ,ಸೇವಾ ಸಮಿತಿ ಶ್ರೀ ಭಾರತೀ ಸಮೂಹ ಸಂಸ್ಥೆಗಳು, ಇವರು ಅಧ್ಯಕ್ಷತೆ ವಹಿಸಿ, ಮಾತನಾಡಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಶ್ರೀ ಭಾರತೀ ಸಮೂಹ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ರಾಜಗೋಪಾಲ್. ಜಿ , ಪ್ರಾಂಶುಪಾಲ ಶ್ರೀ ಸಂದೀಪ್ ಆಚಾರ್ಯ ಹಾಗು ವಿದ್ಯಾರ್ಥಿ  ಸಂಘದ ನಾಯಕ ಭವನ್ ಶೆಟ್ಟಿ ಉಪಸ್ಥಿತರಿದ್ದರು.

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಜಾನ್ವಿ. ಜಿ. ಕಾರ್ಯಕ್ರಮ ನಿರ್ವಹಿಸಿದರು , ಶಿವಾನಿ ಸ್ವಾಗತಿಸಿದರು, ಪ್ರಥಮ ಪಿಯುಸಿ ವಿದ್ಯಾರ್ಥಿ ಪ್ರಥಮ್ ವಂದಿಸಿದರು..

೮ನೇ ತರಗತಿ ಹಾಗು ಪ್ರಥಮ ಪಿಯುಸಿ ವಿದ್ಯಾರ್ಥಿಗಳು ದೇಶಾಭಿಮಾನವನ್ನು ಬಿಂಬಿಸುವ ನೃತ್ಯವನ್ನು ಮಾಡಿ ಪ್ರೇಕ್ಷಕರ ಮನ ಗೆದ್ದರು..ಬಳಿಕ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಗಳನ್ನು ಹಂಚಲಾಯಿತು.

Highslide for Wordpress Plugin